peoplestv.in
ಶಿರಹಟ್ಟಿ : ಕನ್ನಡವೇ ಸಾರ್ವಭೌಮ ಭಾಷೆಯಾಗಬೇಕು ! | People's TV
ಶಿರಹಟ್ಟಿ: ವಿಧಾನ ಸಭೆ ಸೇರಿ ಎಲ್ಲ ಇಲಾಖೆ ಕಚೇರಿಗಳಲ್ಲಿನ ಕಡತ ವ್ಯವಹಾರ ಹಾಗೂ ನ್ಯಾಯಾಲಯದಲ್ಲಿ ನ್ಯಾಯಾಧೀಶರು ನೀಡುವ ತೀರ್ಪು ಸೇರಿ ಮಾತೃ ಭಾಷೆಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಈ ಮೂಲಕ ಕನ್ನಡವೇ ಸಾರ್ವಭೌಮ ಭಾಷೆಯಾಗಬೇಕು ಎಂದು ಸಂಸದ ಶಿವಕುಮಾರ ಉದಾಸಿ ಅಭಿಪ್ರಾಯಪಟ್ಟರು. ಮಾಚೇನಹಳ್ಳಿ ಗ್ರಾಮದಲ್ಲಿ ನಡೆದ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, 'ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಇಂಥ ಸಮ್ಮೇಳನಗಳ ಮೂಲಕ ಕೂಗು ಹಾಕುವ ತಾಪತ್ರಯ ತಪ್ಪಿಲ್ಲ. ನಾಡಿನ 8 ಜನ ರಸಋಷಿ ಸಾಹಿತಿಗಳು ತಮ್ಮ ಸಾಹಿತ್ಯ ಕೃತಿಗಳು ಕೊಡುಗೆಯಾಗಿ ನೀಡುವುದರ ಮೂಲಕ ಜ್ಞಾನಪೀಠ ಪುರಸ್ಕಾರ ಪಡೆದು ಕನ್ನಡ ಭಾಷೆಯ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದರೆ ಮಾತ್ರ ಉಜ್ವಲ ಭವಿಷ್ಯವಿದೆ ಎಂಬ ಭ್ರಮೆ ಕಳಚಿ ತಾಯಿ ಭಾಷೆಯಾದ ಕನ್ನಡ ಕಲಿತು, ಅದೇ ಭಾಷೆಯಲ್ಲಿ ಕೆಎಎಸ್, ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ಉನ್ನತ ಶ್ರೇಣಿಯ ಅಧಿಕಾರಿಗಳಾಗಿ ಕನ್ನಡ ಭಾಷೆಯ ಹಿರಿಮೆ, ಗರಿಮೆ ಹೆಚ್ಚಿಸುವ ಮನೋಭಿಲಾಷೆ ಪ್ರತಿಯೊಬ್ಬ ಕನ್ನಡಿಗರದ್ದಾಗಬೇಕು ಎಂದರು. ಸಾನ್ನಿಧ್ಯ ವಹಿಸಿದ್ದ ಫಕೀರಸಿದ್ಧರಾಮ ಸ್ವಾಮೀಜಿ ಮಾತನಾಡಿ, ಮಾಚೇನಹಳ್ಳಿ ಕನ್ನಡ ಗಟ್ಟಿತನದ ಹಳ್ಳಿ. ಸೊಗಡಿನ ನೆಲದಲ್ಲಿ ಇಂಥ ಸಮ್ಮೇಳನಗಳನ್ನು ಏರ್ಪಡಿಸಿ ಕನ್ನಡ ಭಾಷೆಯ ಸ್ಥಾನಮಾನ